ಮುಂದಿನ 24 ಗಂಟೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು, ಅ.3: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕಮಲಾಪುರ, ಕಾರ್ಕಳ, ಬ್ರಹ್ಮಾವರ, ಭರಮಸಾಗರದಲ್ಲಿ ಉತ್ತಮ ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಒಣಹವೆ ಮುಂದುವರಿದಿದೆ. ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 31.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್ ನಲ್ಲಿ ಕನಿಷ್ಠ 18.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.