ಕರ್ನಾಟಕ ರಾಜ್ಯ ಮುಕ್ತ ವಿವಿ: 2020-21ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಾರಂಭ

Update: 2020-10-03 13:13 GMT

ಬೆಂಗಳೂರು, ಅ.3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2020-21ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಾದ ಬಿಎ, ಬಿಕಾಂ, ಎಂಎ, ಎಂಸಿಜೆ, ಎಂಕಾಂ, ಬಿಎಲ್‍ಐಎಸ್ಸಿ, ಎಂಎಲ್‍ಐಎಸ್ಸಿ, ಎಂಎಸ್ಸಿ, ಎಂಬಿಎ, ಪಿಜಿ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಪ್ರಥಮ ವರ್ಷದ ಕೋರ್ಸ್ ಗಳ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅ.10 ಕೊನೆಯ ದಿನವಾಗಿದೆ. 100ರೂ. ದಂಡ ಶುಲ್ಕದೊಂದಿಗೆ ಅ.20 ಹಾಗೂ 200 ದಂಡದೊಂದಿಗೆ ಅ.29 ಕಡೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, ಮಲ್ಲೇಶ್ವರಂ ಬೆಂ.03. ಇಲ್ಲಿಗೆ ಹಾಗೂ ದೂ.080-23448811, 9844506629, 9620395584ಕ್ಕೆ ಸಂಪರ್ಕಿಸಲು ಕೋರಲಾಗಿದೆ.

ವಿಶೇಷ ಸೂಚನೆ: ಬಿಪಿಎಲ್ ಕಾರ್ಡ್‍ನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ವಿನಾಯಿತಿ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News