ದ.ಕ. ಜಿಲ್ಲೆ : ಕೋವಿಡ್‌ಗೆ ಒಂಬತ್ತು ಬಲಿ, 258 ಮಂದಿಗೆ ಕೊರೋನ ಸೋಂಕು
Update: 2020-10-03 20:32 IST
ಮಂಗಳೂರು, ಅ.3: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಶನಿವಾರ ಮತ್ತೆ 258 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 566ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯೂ 24,019ಕ್ಕೆ ಏರಿಕೆ ಕಂಡಿದೆ. ಒಂದೇದಿನ 344 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಸಂಖ್ಯೆ 17,709ಕ್ಕೆ ಏರಿಕೆಯಾಗಿದೆ. ಇನ್ನು 5,744 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.