×
Ad

ಹತ್ರಸ್ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಆದಿತ್ಯನಾಥ್ ಶಿಫಾರಸು

Update: 2020-10-03 21:04 IST

ಲಕ್ನೊ, ಅ.3: ಹತ್ರಸ್‌ನಲ್ಲಿ ಮೇಲ್ಜಾತಿಯ ನಾಲ್ವರು ವ್ಯಕ್ತಿಗಳು ದಲಿತ ಯುವತಿಯ ಮೇಲೆ ಅತ್ಯಾಚಾರ ಹಾಗೂ ಕೊಲೆಗೈದ ಪ್ರಕರಣದ ಬಗ್ಗೆ ರಾಷ್ಟ್ರವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿಕೊಡಲು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಶಿಫಾರಸು ಮಾಡಿದ್ದಾರೆ.
ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾಗಿರುವ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿಯವರು ನ್ಯಾಯ ಸಿಗುವ ತನಕ ಹೋರಾಟ ಮುಂದುವರಿಸುವುದಾಗಿ ಹೇಳಿಕೆ ನೀಡಿದ ಬೆನ್ನಿಗೆ ಆದಿತ್ಯನಾಥ್ ಈ ಹೆಜ್ಜೆ ಇಟ್ಟಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News