ಅಬ್ಬರಿಸಿದ ಅಯ್ಯರ್, ಪೃಥ್ವಿ ಶಾ ಅರ್ಧಶತಕ: ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಬೃಹತ್ ಮೊತ್ತ
Update: 2020-10-03 21:37 IST
ಶಾರ್ಜಾ: ಆರಂಭಿಕ ಆಟಗಾರ ಪೃಥ್ವಿ ಶಾ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೃಹತ್ ಮೊತ್ತ ಪೇರಿಸಿದ್ದು, ಗೆಲುವಿಗೆ 229 ರನ್ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು.
ಆರಂಭಿಕ ಆಟಗಾರ ಪೃಥ್ವಿ ಶಾ 41 ಎಸೆತಗಳಲ್ಲಿ 66 ರನ್ ಗಳಿಸಿದರು.ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಭರ್ಜರಿಯಾಗಿ ಬ್ಯಾಟ್ ಬೀಸಿದರು. ಅವರು ಕೇವಲ 38 ಎಸೆತಗಳಲ್ಲಿ 88 ರನ್ ಸಿಡಿಸಿದರು. ರಿಷಬ್ ಪಂತ್ 17 ಎಸೆತಗಳಲ್ಲಿ 38 ರನ್ ಬಾರಿಸಿದರು
ಕೊಲ್ಕತ್ತಾ ಪರ ಆಂಡ್ರೆ ರಸ್ಸೆಲ್ 2 ವಿಕೆಟ್ ಪಡೆದರು.