ಪ.ಜಾತಿ, ಪಂಗಡ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ
Update: 2020-10-03 21:57 IST
ಉಡುಪಿ, ಅ. 3: ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಅಹವಾಲು ಗಳಿದ್ದಲ್ಲಿ ಅ.9ರೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ / ಕುಂದಾಪುರ / ಕಾರ್ಕಳ ಇಲ್ಲಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.