ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ
Update: 2020-10-03 22:15 IST
ಮಂಗಳೂರು, ಅ.3: ಉತ್ತರ ಪ್ರದೇಶದ ಹತ್ರಸ್‌ನಲ್ಲಿ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ನಗರದ ನಂತೂರು ವೃತ್ತದಲ್ಲಿ ಶನಿವಾರ ಸಂಜೆ ಮೌನ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕ-ಯುವತಿಯರು ಪಾಲ್ಗೊಂಡಿದ್ದರು. ಎಲ್ಲರೂ ಅತ್ಯಾಚಾರ ಪ್ರಕರಣ ವಿರೋಧಿ ಸುವ, ಖಂಡಿಸುವ ಕುರಿತ ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿದರು. ರಸ್ತೆಯ ಬದಿಯಲ್ಲಿ ಸಾಲುಸಾಲಾಗಿ ನಿಂತು ಒಗ್ಗಟ್ಟು ಪ್ರದರ್ಶನದ ಮೂಲಕ ಮೌನವಾಗಿಯೇ ಆಕ್ರೋಶ ಹೊರಹಾಕಿ ಗಮನ ಸೆಳೆದರು. ಕೋವಿಡ್‌ನಿಂದ ಸುರಕ್ಷತಾ ದೃಷ್ಟಿಯಿಂದ ಎಲ್ಲ ಪ್ರತಿಭಟನಾಕಾರರು ಮಾಸ್ಕ್ ಧರಿಸಿದ್ದರು.