×
Ad

ಡಾ.ಆನಂದ ವಿ. ಶೆಟ್ಟಿ ನಿಧನ

Update: 2020-10-03 23:00 IST

ಮಂಗಳೂರು, ಅ.3: ಮಂಗಳೂರಿನ ಖ್ಯಾತ ಹೃದಯ ತಜ್ಞ ಡಾ.ಆನಂದ ವಿ. ಶೆಟ್ಟಿ (86) ಶನಿವಾರ ನಿಧನರಾದರು.

ಇವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ವತ್ರೆಯಲ್ಲಿ ಹೃದಯ ತಜ್ಞರಾಗಿ ಕೆಲಸ ನಿರ್ವಹಿಸಿದ್ದಾರೆ. ನಂತರ ಕಾರ್‌ಸ್ಟ್ರೀಟ್‌ನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಅನೇಕರಿಗೆ ಚಿಕಿತ್ಸೆ ನೀಡಿದ್ದಾರೆ. ಇವರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದ ಸ್ಥಾಪಕ ಟ್ರಸ್ಟಿಯಾಗಿ ದೇವರ ಸೇವೆಯನ್ನು ಮಾಡುತ್ತಿದ್ದರು. ಇವರು ಶಕ್ತಿ ಶಿಕ್ಷಣ ಸಂಸ್ಥೆಯ ಸ್ಥಾಪನೆಯಿಂದ ಇಂದಿನವರೆಗೆ ಮಾರ್ಗದರ್ಶಕರಾಗಿ, ಹಿತ್ಯೇಷಿಗಳಾಗಿ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಶ್ರದ್ಧಾಂಜಲಿ: ಮಂಗಳೂರಿನ ಖ್ಯಾತ ಹೃದಯ ತಜ್ಞ ಡಾ.ಆನಂದ ವಿ. ಶೆಟ್ಟಿ ನಿಧನಕ್ಕೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದ ಆಡಳಿತ ಮೊಕ್ತೇಸರ ಡಾ.ಕೆ.ಸಿ. ನಾಕ್ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News