ಮೊಂಟೆಪದವು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ
Update: 2020-10-04 12:29 IST
ಉಳ್ಳಾಲ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಬಾಲವಿಕಾಸ ಸಮಿತಿ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಯನ್ನು ಮೊಂಟೆಪದವು ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು.
ನರಿಂಗಾನ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಸಿ ಎಚ್ ರಹಿಮಾನ್ ಚಂದಹಿತ್ಲು ಅವರು ಗಾಂಧಿ ಜಯಂತಿ ಮಹತ್ವದ ಕುರಿತು ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳ ಸ್ವಚ್ಛತೆ ಕಾಪಾಡುವ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಸವಿತಾ ನದಿಡ ಅವರು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಜಾರಿಗೆ ಬಂದ ಉದ್ದೇಶ , ಸೇವಾ ಸೌಲಭ್ಯಗಳ ಬಗ್ಗೆ ವಿಷಯ ತಿಳಿಸಿದರು.
ಮೇಲ್ವಿಚಾರಕಿ ಸಿಂಧೂ ಅವರು ಪೋಷನ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಬಾಲವಿಕಾಸದ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪೋಷನ್ ಅಭಿಯಾನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಚಂದ್ರಿಕಾ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.