ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನಿಧನಕ್ಕೆ ಸಿಎಂ ಸಂತಾಪ
Update: 2020-10-04 16:56 IST
ಬೆಂಗಳೂರು, ಅ. 4: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷರಾಗಿದ್ದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀಗಳು ಗೋಡೆಕೆರೆ ಮಠಕ್ಕೆ 9ನೆ ಗುರುಗಳಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಮಠದಿಂದ ಶಾಲಾ ಕಾಲೇಜುಗಳು, ವಸತಿ ನಿಲಯ ಹಾಗೂ ಅನಾಥಾಶ್ರಮಗಳನ್ನು ತೆರೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗಿದ್ದರು. ಶ್ರೀಗಳ ಅಕಾಲಿಕ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಪಾರ ಭಕ್ತ ವೃಂದಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.