ಕಳವು ಆರೋಪ ಪ್ರಕರಣ: ನಾಲ್ವರ ಬಂಧನ
ಬೆಂಗಳೂರು, ಅ.4: ಕಳವು ಆರೋಪ ಪ್ರಕರಣ ಸಂಬಂಧ ಇಲ್ಲಿನ ಆರ್ ಟಿನಗರ ಠಾಣಾ ಪೊಲೀಸರು, ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ನಗರದ ನಿವಾಸಿಗಳಾದ ಶೇಕ್ ಅಬ್ರಾರ್, ಬಾಷಾ, ಮುಫೀದ್ ಹಾ ಅತೀಖ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ನಗರದ ಕೇಕ್ ಪ್ಯಾಲೇಸ್ ಮುಂಭಾಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಅನ್ನು ಆರೋಪಿಗಳು ಕಂಡು ಓಡಾಲಾರಂಭಿಸಿದ್ದಾರೆ. ಈ ವೇಳೆ ಶಂಕೆ ವ್ಯಕ್ತಪಡಿಸಿ ಆರೋಪಿಗಳ ಬೆನ್ನತ್ತಿ ಹಿಡಿದು ವಿಚಾರಣೆ ನಡೆಸಿದಾಗ ಮಾರಕಾಸ್ತ್ರಗಳಿಂದ ಬೆದರಿಸಿ, ದರೋಡೆಗೆ ಯೋಜನೆ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.
ಬಂಧಿತರ ಪೈಕಿ ಶೇಕ್ ಅಬ್ರಾರ್ ಬೆಂಗಳೂರಿನ ಔಷಧಿ ಅಂಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, 2018ರಲ್ಲಿ ಯಶವಂತಪುರ ಪೊಲೀಸ್ ಠಾಣೆಯ ದರೋಡೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ, ಇನ್ನುಳಿದ ಆರೋಪಿಗಳ ಮೇಲೆ ಆರ್‍ಟಿ ನಗರ ಠಾಣೆಯಲ್ಲಿ 6 ಪ್ರಕರಣ, ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ 6 ಪ್ರಕರಣ ಸೇರಿದಂತೆ ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
ಬಂಧಿತ ಆರೋಪಿಗಳಿಂದ 28.3 ಲಕ್ಷ ಮೌಲ್ಯದ 10ಕ್ಕೂ ಹೆಚ್ಚು ಬೈಕ್ ಗಳನ್ನು ಜಪ್ತಿ ಮಾಡಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.