ಅಪಘಾತದ ಬಳಿಕ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ
Update: 2020-10-04 17:06 IST
ಬೆಂಗಳೂರು, ಅ. 4: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಎಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಿವಾಸಿ ಅರುಣ್(24) ಕೊಲೆಯಾಗಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಶನಿವಾರ ರಾತ್ರಿ ಅರುಣ್ ವಿಜ್ಞಾನ ನಗರಕ್ಕೆ ಬೈಕ್‍ನಲ್ಲಿ ಹೋಗುವಾಗ ಮತ್ತೊಂದು ಬೈಕ್‍ಗೆ ಢಿಕ್ಕಿ ಹೊಡೆದಿದೆ. ಎರಡು ಬೈಕ್ ಸವಾರರ ನಡುವೆ ಆರಂಭವಾದ ಈ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.
ಈ ಸಂಬಂಧ ಎಚ್‍ಎ ಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೆÇಲೀಸರು ಬಲೆ ಬೀಸಿದ್ದಾರೆ.