ಸಂಪುಟ ವಿಸ್ತರಣೆಯಲ್ಲಿ ಸಿಎಂ ಬಿಎಸ್‍ವೈ ನಿರ್ಧಾರಕ್ಕೆ ಬದ್ಧ: ಸಚಿವ ರಮೇಶ್ ಜಾರಕಿಹೊಳಿ

Update: 2020-10-04 14:30 GMT

ಬೆಳಗಾವಿ, ಅ. 4: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು ಕೈಬಿಡಬಹುದು ಎಂದು ತಿಳಿಸಿದರು.

ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News