ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಪರಪ್ಪನ ಅಗ್ರಹಾರ ಜೈಲು ಅಧೀಕ್ಷಕ

Update: 2020-10-04 15:41 GMT

ಬೆಂಗಳೂರು, ಅ. 4: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಡುತ್ತಾರೆ ಎನ್ನುವ ಆರೋಪಗಳ ನಡುವೆ ಬಂಧಿತ ಆರೋಪಿಯೊಬ್ಬನ ಪೆರೋಲ್ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗೃಹದ ಸಿಬ್ಬಂದಿಯೊರ್ವ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಆರೋಪಿಯೊಬ್ಬನಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತು. ಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಂ ಅಪರಾಧಿಯನ್ನು ಬಿಡುಗಡೆ ಮಾಡಲು10 ಸಾವಿರ ಹಣ ಕೇಳಿ 5 ಸಾವಿರ ಹಣ ಮುಂಗಡವಾಗಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಣ ಕೊಡಲು ಇಷ್ಟವಿಲ್ಲದ ವ್ಯಕ್ತಿ ವಿಷಯವನ್ನು ತಮ್ಮ ಪತ್ನಿಗೆ ತಿಳಿಸಿದ್ದಾರೆ. ತದನಂತರ ಆಕೆ ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಎಸಿಬಿ ಅಧಿಕಾರಿಗಳು ಜಯರಾಂ ಸಜಾ ಬಂಧಿತನ ಪತ್ನಿಯಿಂದ 5 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ಪ್ರಕರಣ ಬೇಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News