ಪತ್ರಕರ್ತ ಅಣ್ಣೂರು ಲಕ್ಷ್ಮಣ್‍ಗೆ ಜೀವಮಾನ ಸಾಧನೆ ಪ್ರಶಸ್ತಿ

Update: 2020-10-04 18:32 GMT

ಮಂಡ್ಯ, ಅ.4: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಂಬೇಡ್ಕರ್ ಭವನದಲ್ಲಿ ರವಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಭವನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಅಣ್ಣೂರು ಲಕ್ಷ್ಮಣ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕೆ.ಎನ್.ರವಿ, ಎಚ್.ಕೆ.ವಸಂತಕುಮಾರ್ ಹಾಗೂ ಎಚ್.ಕೆ.ವಸಂತಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ, ಶಾಸಕ ಡಿ.ಸಿ.ತಮ್ಮಣ್ಣ, ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಸದಸ್ಯರಾದ ಸೋಮಶೇಖರ್ ಕೆರಗೋಡು, ಡಿ.ಎಲ್.ಲಿಂಗರಾಜು, ರಾಷ್ಟ್ರೀಯ ಸಮಿತಿ ಸದಸ್ಯ ಪಿ.ಜೆ.ಚೈತನ್ಯಕುಮಾರ್, ಜಿಲ್ಲಾ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಂ.ಕೆ.ಮೋಹನ್ ರಾಜ್, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News