ಕೋರ್ಟ್ ತಡೆಯಾಜ್ಞೆ ನೀಡಿದಾಗ ದಾಳಿ ನಡೆಸಲು ಬರುವುದಿಲ್ಲ: ಎ.ಎಸ್.ಪೊನ್ನಣ್ಣ

Update: 2020-10-05 12:59 GMT

ಬೆಂಗಳೂರು, ಅ.5: ರಾಜ್ಯ ಸರಕಾರದ ಅನುಮತಿಯನ್ನು ಪಡೆಯದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕ್ರಮ ಕಾನೂನಾತ್ಮಕವಾಗಿಲ್ಲ. ಇದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ, ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ದಾಳಿ ವಿಚಾರದಲ್ಲಿ ಈಗಾಗಲೇ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದೆಂದು ನಿರ್ದೇಶನವನ್ನೂ ನೀಡಿದೆ. ಆದರೂ ದಾಳಿ ನಡೆದಿದೆ. ಮುಕ್ತವಾದ ತನಿಖೆಗೆ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಸಿಬಿಐ ದಾಳಿ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಸೇರಿ ಹಲವು ಪ್ರಮುಖರು ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಬಳಿ ದೌಡಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News