ಸಚಿವ ಸುರೇಶ್ ಕುಮಾರ್ ಗೆ ಕೊರೋನ ಪಾಸಿಟಿವ್
Update: 2020-10-05 19:22 IST
ಬೆಂಗಳೂರು, ಅ.5: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೋವಿಡ್-19 ಇರುವುದು ಇಂದು ಖಚಿತವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ವೈದ್ಯರ ಸಲಹೆಯ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ರೋಗ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ ಎಂದು ಹೇಳಿದ್ದಾರೆ.