×
Ad

ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇಬೇಕು: ಡಾ.ಕೆ.ಸುಧಾಕರ್

Update: 2020-10-05 20:06 IST

ಬೆಂಗಳೂರು, ಅ.5: ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಸಿಬಿಐ, ಈಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇಬೇಕು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News