×
Ad

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ

Update: 2020-10-05 20:19 IST

ಉಡುಪಿ, ಅ. 5: ಜಿಲ್ಲೆಯಲ್ಲಿ ತೆರವಾಗಿರುವ ಫಾರ್ಮಸಿಸ್ಟ್ (23) ಹುದ್ದೆ ಗಳನ್ನು ತಾತ್ಕಾಲಿಕ ನೆಲೆಯಲ್ಲಿ 4 ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ, ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅ.9ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಅಜ್ಜರಕಾಡು, ಉಡುಪಿ ಜಿಲ್ಲಾ ಆಸ್ಪತ್ರೆ ಇವರಿಗೆ ಸಲ್ಲಿಸಬೇಕು. ಅಲ್ಲದೇ ಅ.12 ರಂದು ಬೆಳಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆ ಮತ್ತು ದೃಢೀಕೃತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News