ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೂಲಿಕಾರರ ಸಮಾವೇಶ
ಬ್ರಹ್ಮಾವರ, ಅ.5: ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಜಿ. ಕಾಲೋನಿಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರ ಸಮಾವೇಶ ಅ.4ರಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ದೇವೇಂದ್ರ ಸುವರ್ಣ ಅವರ ಮನೆ ವಠಾರದಲ್ಲಿ ಜರಗಿತು.
ಸಮಾವೇಶವನ್ನು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಉದ್ಘಾಟಿಸಿ, ಗ್ರಾಮೀಣ ಪ್ರದೇಶದ ಬಡಕೂಲಿಕಾರರು ಕೊರೊನ ಸಂದಿಗ್ದ ಪರಿಸ್ಥಿತಿಯಲ್ಲಿ ನಿರುದ್ಯೋಗ ದಿಂದ ಸಂಕಷ್ಟದ ಜೀವನ ಸಾಗಿಸುತ್ತಿದ್ದು, ಇದನ್ನು ಪರಿಹರಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕ ವಾಗಿ ಜಾರಿಗೊಳಿಸಬೆಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಸುಮಾರು 50 ಮಂದಿ ಕೂಲಿಕಾರರನ್ನೊಳಗೊಂಡ ನರೇಗಾ ಕಾಯಕ ಸಂಘ ರಚನೆ ಮಾಡಲಾಯಿತು. ಕಾಯಕ ಸಂಘದ ಕಾಯಕ ಬಂಧುವಾಗಿ ವಡ್ಡರ್ಸೆ ದೇವೇಂದ್ರ ಸುವರ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉದ್ಯೋಗ ಚೀಟಿ ಪಡೆಯಲು ಸ್ಥಳಿಯ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಭೇಟಿ ಮಾಡಲು ತೀರ್ಮಾನಿಸಲಾಯಿತು.