×
Ad

ದಿಲ್ಲಿ ಗಲಭೆ: ಉಮರ್ ಖಾಲಿದ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Update: 2020-10-05 21:39 IST

ಹೊಸದಿಲ್ಲಿ, ಅ. 5: ಈಶಾನ್ಯ ದಿಲ್ಲಿಯಲ್ಲಿ 2020ರಲ್ಲಿ ಸಂಭವಿಸಿದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರ್ ಲಾಲ್ ನೆಹರೂ (ಜೆಎನ್‌ಯು) ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರಿಗೆ ದಿಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

 ಅವರಿಗೆ ಸಾಕಷ್ಟು ಭದ್ರತೆ ಒದಗಿಸುವಂತೆ ಕಾರಾಗೃಹದ ಅಧಿಕಾರಿಗಳಿಗೆ ದಿಲ್ಲಿ ನ್ಯಾಯಾಲಯ ಸೂಚಿಸಿದೆ. ಖಾಜುರಿ ಖಾಸಾ ಪ್ರದೇಶದಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಮರ್ ಖಾಲಿದ್ ಅವರನ್ನು ಮೆಟ್ರೋಪಾಲಿಟಿನ್ ದಂಡಾಧಿಕಾರಿ ದೇವ್ ಸರೋಹಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಉಮರ್ ಖಾಲಿದ್ ಅವರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.

ಉಮರ್ ಖಾಲಿದ್ ಅವರಿಗೆ ಯಾವುದೇ ತೊಂದರೆ ಉಂಟಾಗದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸಾಕಷ್ಟು ಭದ್ರತೆ ಒದಗಿಸುವಂತೆ ನ್ಯಾಯಾಲಯ ಕಾರಾಗೃಹದ ಸುಪರಿಂಟೆಂಡೆಂಟ್ ಅವರಿಗೆ ನಿರ್ದೇಶಿಸಿತು. ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ನ್ಯಾಯಾಲಯ ಉಮರ್ ಖಾಲಿದ್ ಅವರಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News