×
Ad

ಬೆಂಗಳೂರಿನಲ್ಲಿ 2,189 ಕೊರೋನ ಪ್ರಕರಣಗಳು ದೃಢ: 34 ಸೋಂಕಿತರು ಮೃತ್ಯು

Update: 2020-10-05 22:34 IST

ಬೆಂಗಳೂರು, ಅ.5: ನಗರದಲ್ಲಿ ಸೋಮವಾರ ಒಂದೇ ದಿನ 2,189 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,972 ಸೋಂಕಿತರು ಬಿಡುಗಡೆಯಾಗಿದ್ದು, 34 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,52,229 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,101 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,95,015 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 54,112 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 3,02,512 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News