×
Ad

ರಬಾಡ ಬೌಲಿಂಗ್ ಪ್ರಹಾರ: ಡೆಲ್ಲಿ ಎದುರು 59 ರನ್ ಗಳಿಂದ ಸೋತ ಆರ್‌ಸಿಬಿ

Update: 2020-10-05 23:14 IST

ದುಬೈ: ಡೆಲ್ಲಿ ಕ್ಯಾಪಿಟಲ್ಸ್ ವಿಧಿಸಿದ ಬೃಹತ್ ಮೊತ್ತವನ್ನು ಬೆನ್ನಟ್ಟಲು ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 59 ರನ್ ಗಳಿಂದ ಸೋತಿದ್ದು, ಟೂರ್ನಿಯಲ್ಲಿ ಎರಡನೇ ಸೋಲು ಕಂಡಿದೆ. ನಾಲ್ಕನೇ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನಕ್ಕೆ ಏರಿದೆ.

ಗೆಲುವಿಗೆ 197 ರನ್ ಗುರಿ ಪಡೆದ ಬೆಂಗಳೂರು ತಂಡವು ನಿಗದಿತ 20 ಓವರ್ ಗಳಲ್ಲಿ 9 ವಿಕಟ್ ನಷ್ಟಕ್ಕೆ ಕೇವಲ 139 ರನ್ ಗಳಿಸಿ ಸೋಲೊಪ್ಪಿಕೊಂಡಿತು. ವಿರಾಟ್ ಕೊಹ್ಲಿ ಮಾತ್ರ ಏಕಾಂಗಿ ಹೋರಾಟ ಪ್ರದರ್ಶಿಸಿದರು. ಅವರು 39 ಎಸೆತಗಳಲ್ಲಿ 43 ರನ್ ಗಳಿಸಿ ಔಟಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಕಾಗಿಸೋ ರಬಾಡ 4 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕಟ್ ನಷ್ಟಕ್ಕೆ 196 ರನ್ ಗಳಿಸಿತು. ಆರಂಭಿಕ ಆಟಗಾರ ಪೃಥ್ವಿ ಶಾ 23 ಎಸೆತಗಳಲ್ಲಿ 42, ಶಿಖರ್ ಧವನ್ 32, ರಿಷಬ್ ಪಂತ್ 37, ಮಾರ್ಕಸ್ ಸ್ಟೋನಿಸ್ 26 ಎಸೆತಗಳಲ್ಲಿ 53 ರನ್ ಬಾರಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮುಹಮ್ಮದ್ ಸಿರಾಜ್ 2, ಮೊಯೀನ್ ಅಲಿ ಹಾಗೂ ಇಸುರು ಉದಾನ ತಲಾ 1 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News