×
Ad

ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ

Update: 2020-10-05 23:25 IST

ಬೆಂಗಳೂರು, ಅ.5: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಇಲ್ಲಿನ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಮಂಜುನಾಥ್(24), ಸಿದ್ದಿಖ್ ಪಾಷ(20) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಹೊರವಲಯದ ಎಂ.ಎನ್.ಟಿ ಲೇಔಟ್ ಬಳಿಯ ಹನುಮಂತೇಗೌಡನಪಾಳ್ಯ ರಸ್ತೆಯಲ್ಲಿ ಈ ಇಬ್ಬರು ಯುವಕರು ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಇವರಿಂದ 10 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News