ಸಂಸದ ಡಿ.ಕೆ. ಸುರೇಶ್ ಗೆ ಕೊರೋನ ಸೋಂಕು ದೃಢ
Update: 2020-10-06 18:37 IST
ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.