ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
Update: 2020-10-06 20:41 IST
ಉಡುಪಿ, ಅ.6: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‌ಸೈಟ್- https://scholarships.gov.in- ಮೂಲಕ ಅಕ್ಟೋಬರ್ 31ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾತಿಗಾಗಿ ಇಲಾಖೆಯ ವೆಬ್‌ಸೈಟ್-https://gokdom.kar.nic.in, ಅಥವಾ ಉಡುಪಿ ತಾಲೂಕು (ದೂ.ಸಂಖ್ಯೆ: 0820-2574596), ಕುಂದಾಪುರ ತಾಲೂಕು (ದೂ.ಸಂಖ್ಯೆ: 08254-230370), ಕಾರ್ಕಳ ತಾಲೂಕು (ದೂ.ಸಂಖ್ಯೆ: 08258-231101)ಗಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.