×
Ad

ಬಿ.ಸಿ.ರೋಡ್ : ಹತ್ರಸ್ ಪ್ರಕರಣ ಖಂಡಿಸಿ ಎಬಿವಿಪಿ ಪ್ರತಿಭಟನೆ

Update: 2020-10-06 20:48 IST

ಬಿ.ಸಿ.ರೋಡ್ : ಉತ್ತರ ಪ್ರದೇಶದ ಹತ್ರಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬಿ.ಸಿ ರೋಡಿನ ಮಿನಿ ವಿಧಾನಸೌಧ ದ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ  ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ  ಪ್ರೊ.ನಾರಾಯಣ ಭಂಡಾರಿ ಸಮಾಜದ ಯುವ ಜನರು ಸಂಸ್ಕಾರವಂತ ಶಿಕ್ಷಣ ಪಡೆದಾಗ ಮಾತ್ರ ಇಂತಹ ಪ್ರಕರಣಗಳು ಕಡಿಮೆಯಾಗುತ್ತದೆ ಹಾಗೂ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದೆಂದಿದ್ದರೆ ಕಠಿಣ ಕಾನೂನಿನ ಜಾರಿಯಾಗಬೇಕು ಆಗ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದರು.

ಪ್ರತಿಭಟನೆ ಬಳಿಕ ಅ.ಭಾ.ವಿ.ಪ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಷ್ಟಪತಿಗಳಿಗೆ ಮನಿಷಾ ವಾಲ್ಮೀಕಿ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕು ಹಾಗೂ ಅತ್ಯಾಚಾರ ತಡೆಗೆ ಕಠಿಣ ಕಾನೂನಿನ ರಚನೆಯಾಗಬೇಕೆಂದು ಮನವಿಯನ್ನು ಸಲ್ಲಿಸಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕ ಆಶಿಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಖಿಲಾಷ್, ತಾಲೂಕು ಸಂಚಾಲಕ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕ ದಿನೇಶ್ ಕೊಯಿಲ, ಸಿದ್ದಕಟ್ಟೆ ಘಟಕದ ಅದ್ಯಕ್ಷ ಗುರುಪ್ರಸಾದ್, ಚೇತನ್ ಒಕ್ಕೆತ್ತೂರು, ಆಕಾಶ್, ಮಹೇಶ್, ಹರ್ಷಿತ್ ಅರಳ, ನಿತಿನ್ ಸಿದ್ದಕಟ್ಟೆ, ತಿಲಕ್ ಶೆಟ್ಟಿ ಪೂಂಜ, ನಾಗರಾಜ್ ಶೆಣೈ, ಅನೀಶ್ ಚೇಳೂರು, ಸುಮಂತ್, ಲಿಖಿತ್ ಮೊದಲಾದವರು ಪ್ರತಿಭಟನೆವಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News