×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2020-10-06 21:19 IST

ಬ್ರಹ್ಮಾವರ, ಅ. 6: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಮತ್ತು ಕೆಲವು ವರ್ಷಗಳಿಂದ ಫೀಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಪೆಜ ಮಂಗೂರು ಗ್ರಾಮದ ಕೊಕ್ಕರ್ಣೆ, ಗಾಂಧಿನಗರ ನಿವಾಸಿ ಚಂದ್ರಹಾಸ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.5ರಂದು ರಾತ್ರಿ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಉದರ ಬೇನೆಯಿಂದ ಬಳಲುತ್ತಿದ್ದ ಕಾಳಾವರ ಗ್ರಾಮದ ಕರಿಕಲ್‌ಕಟ್ಟೆ ಸೆಲ್ವಾಡಿ ನಿವಾಸಿ ಮಂಜುನಾಥ ಆಚಾರ್ಯ(86) ಎಂಬವರು ಅ.5ರಂದು ಮಧ್ಯಾಹ್ನ ಒಂದು ಗಂಟೆಗೆ ಮಾನಸಿಕವಾಗಿ ನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹಕ್ಲಾಡಿಗುಡ್ಡೆಯ ನಿವಾಸಿ ಬೇಬಿ(55) ಎಂಬವರು ಅ.5ರಂದು ಬೆಳಗ್ಗೆ ಹಗ್ಗ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News