ಪಡುಬಿದ್ರೆ : ಹತ್ರಸ್ ಪ್ರಕರಣ, ಡಿಕೆಶಿ ಮನೆಗೆ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ

Update: 2020-10-06 17:09 GMT

ಪಡುಬಿದ್ರಿ : ಉತ್ತರ ಪ್ರದೇಶದ ಹತ್ರಸ್‍ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ನಡೆದ ಸಿಬಿಐ ದಾಳಿಯನ್ನು ಖಂಡಿಸಿ ಪಡುಬಿದ್ರಿ ಪೇಟೆಯಲ್ಲಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಯಿತು.

ಗ್ರಾಮೀಣ ಕಾಂಗ್ರೆಸ್ ಹಾಗೂ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಮೊಂಬತ್ತಿ ಉರಿಸಿದರು. ಉತ್ತರ ಪ್ರದೇಶ ಸರ್ಕಾರ, ಕರ್ನಾಟಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಮಾತನಾಡಿ, ಉತ್ತರ ಪ್ರದೇಶದಲ್ಲಿ ಅತ್ಯಾಚಾರಿಗಳಿಗೆ ರಕ್ಷಣೆ ಸರ್ಕಾರದ ಒದಗಿಸುತ್ತಿದೆ. ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ ನಡೆಯುತಿದ್ದು, ಈ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಅವರು ಕಾವಿ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ವಿನಯಕುಮಾರ್ ಸೊರಕೆ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರ ಮನೆ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಮಗವ ವಿರುದ್ಧ ಆರೋಪಗಳಿದ್ದರೂ ಅವರ ಮನೆ ಮೇಲೆ ದಾಳಿ ನಡೆಸಲಾಗದು, ಬಿಜೆಪಿ ನಾಯಕರ ಮನೆ ಮೇಲೆ ದಾಳಿ ನಡೆ ಸಲು ಹಿಂದೇಟು ಹಾಕಲಾಗುತ್ತದೆ. ರಾಜಕೀಯ ದುರುದ್ದೇಶದಿಂತ ಇಂತಹ ದಾಳಿಗಳನ್ನು ಪಕ್ಷ ಸಹಿಸುವುದಿಲ್ಲ. ಇನ್ನಷ್ಟು ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ, ನವೀನ್‍ಚಂದ್ರ ಜೆ.ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಗೀತಾ ವಾಗ್ಲೆ, ಅಬ್ದುಲ್ ಅಝೀಝ್ ಹೆಜಮಾಡಿ, ಕರುಣಾಕರ ಪೂಜಾರಿ, ನವೀನ್ ಎನ್. ಶೆಟ್ಟಿ, ದಮಯಂತಿ ಅಮೀನ್, ವೈ ಸುಕುಮಾರ್, ಜಿತೇಂದ್ರ ಪುರ್ಟಾಡೋ, ರಮೀಝ್ ಹುಸೈನ್, ಗಣೇಶ್ ಕೋಟ್ಯಾನ್, ಜ್ಯೋತಿ ಮೆನನ್, ನಿಯಾಝ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News