ಕ್ರಿಕೆಟ್ ಬೆಟ್ಟಿಂಗ್: ಐವರ ಬಂಧನ, ನಗದು- ಮೊಬೈಲ್ ವಶ

Update: 2020-10-07 14:27 GMT

ಬೆಂಗಳೂರು, ಅ.7: ಐಪಿಎಲ್ ಪ್ರಾರಂಭವಾದ ಬೆನ್ನಲ್ಲೇ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೋರಮಂಗಲದ ನಿವಾಸಿಗಳಾದ ನಯೀಂ(44), ಸುಬ್ಬಯ್ಯ(40), ಫಾರೂಕ್(48), ಇಜಾಝ್(48) ಹಾಗೂ ಅಲೆಗ್ಸಾಂಡರ್(24) ಎಂದು ಗುರುತಿಸಲಾಗಿದೆ.

ಇಂದಿರಾನಗರ ವ್ಯಾಪ್ತಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 56 ಸಾವಿರ ನಗದು ಮತ್ತು ಐದು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ನಯೀಂ ತನ್ನ ಸಹಚರರೊಂದಿಗೆ ಸೇರಿಕೊಂಡು ಮೊಬೈಲ್ ಮುಖಾಂತರ ಬುಕ್ಕಿಯೊಂದಿಗೆ ಸಂಭಾಷಣೆ ನಡೆಸುತ್ತಾ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದುದ್ದು ವಿಚಾರಣೆಯಿಂದ ತಿಳಿದು ಬಂದಿದೆ.

ಈ ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾನಗರ ಠಾಣೆ ಪೊಲೀಸರು ಆರೋಪಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News