ನಾಲ್ವರು ಬಾಲ ಕಾರ್ಮಿಕರ ರಕ್ಷಣೆ

Update: 2020-10-07 14:31 GMT

ರಾಯಚೂರು, ಅ.6: ಜಿಲ್ಲೆಯ ಮಾನ್ವಿ ಪಟ್ಟಣದ ವಿವಿಧ ವಾಣಿಜ್ಯ ಉದ್ದಿಮೆ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಮಾನ್ವಿ ಪಟ್ಟಣದ ಗ್ಯಾರೇಜ್, ಹೋಟೆಲ್, ಹಾರ್ಡ್‍ವೇರ್ ಶಾಪ್ ಹಾಗೂ ಬಟ್ಟೆ ಅಂಗಡಿಗಳಲ್ಲಿ ನಾಲ್ವರು ಮಕ್ಕಳು ಕೆಲಸ ಮಾಡುತ್ತಿದ್ದರು. ಇವರನ್ನು ರಕ್ಷಿಸಿ ಬಿಡುಗಡೆಗೊಳಿಸಲಾಗಿದೆ. ಬಳಿಕ ಮಕ್ಕಳನ್ನು ಪಾಲಕರಿಗೆ ಹಸ್ತಾಂತರಿಸಲಾಯಿತು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ನಾಲ್ವರು ಅಂಗಡಿ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯಡಿ ಮಾನ್ವಿ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News