ಕರಾವಳಿ ಫಾರ್ಮಸಿ ಕಾಲೇಜಿಗೆ ಶೇ.100 ಫಲಿತಾಂಶ
Update: 2020-10-07 20:50 IST
ಮಂಗಳೂರು, ಅ.7: ನಗರ ಹೊರವಲಯದ ವಾಮಂಜೂರಿನಲ್ಲಿರುವ ಕರಾವಳಿ ಕಾಲೇಜ್ ಆಫ್ ಫಾರ್ಮಸಿಯು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯ ನಡೆಸಿದ ಅಂತಿಮ ವರ್ಷದ ಎಂ.ಫಾರ್ಮಾ ಮತ್ತು ಫಾರ್ಮ ಡಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಅಂತಿಮ ವರ್ಷದ ಎಂ. ಫಾರ್ಮಾ ಪರೀಕ್ಷೆಯಲ್ಲಿ ಶೇ.50 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಹಾಗೂ ಶೇ.50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಅಂತಿಮ ವರ್ಷದ ಫಾರ್ಮ ಡಿ. ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಬಂದಿದ್ದು, ಶೇ.46 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಹಾಗೂ ಶೇ.54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.