ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ ಆರೋಪ : ದೂರು

Update: 2020-10-07 17:21 GMT

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಎಂಬವರು ದೂರು ನೀಡಿದ್ದು, ಆರೋಪಿ ಲೋಕೇಶ್ ಗೌಡ ಪೆಲತ್ತಡಿ ಎಂಬಾತ ಅ.5ರಂದು ಗ್ರಾ.ಪಂ. ಕಚೇರಿಗೆ ಆಗಮಿಸಿ ತನ್ನನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅ.6ರಂದು ಮತ್ತೆ ಬಂದ ಆತ ತನ್ನನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಸಿದ್ದಾನೆ. ಈತನ ಮನೆಗೆ ತೆರಳುವ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸಿದ್ದು, ಅದು ಕ್ಯೂರಿಂಗ್ ಆಗುವ ಉದ್ದೇಶದಿಂದ ವಾಹನಗಳು ಸಂಚರಿಸದಂತೆ ಆ ರಸ್ತೆಗೆ ಅಡ್ಡಲಾಗಿ ಮರದ ಬೇಲಿಯನ್ನು ನಿರ್ಮಿಸಲಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಈತ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News