ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ

Update: 2020-10-08 09:48 GMT

ಬೆಂಗಳೂರು : ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ  ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.

ಇಂದು ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ  ಅಭಿವೃದ್ಧಿಗೆ  ಇರುವ ತೊಡಕುಗಳನ್ನು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳು ಅನುಮತಿ ನೀಡಿದರು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆ ಯನ್ನು ಮಂಡಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News