ದಿಲ್ಲಿ-ಬೆಂಗಳೂರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Update: 2020-10-08 11:52 GMT

ಬೆಂಗಳೂರು, ಅ.8: ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನಡೆದಿದೆ.

ದೆಹಲಿಯಿಂದ ಬೆಂಗಳೂರಿಗೆ ಬಂದ 6ಇ122 ವಿಮಾನದಲ್ಲಿ ಗಂಡು ಮಗುವಿನ ಜನನವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ 7:40ಕ್ಕೆ ಬಂದು ತಲುಪಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂಡಿಗೋ ಸಂಸ್ಥೆಯ ಸಿಬ್ಬಂದಿ ಶ್ರಮದಿಂದ ತಾಯಿ ಮತ್ತು ಮಗುವಿಗೆ ಯಾವುದೇ ತೊಂದರೆಯಾಗದೇ ವಿಮಾನದಲ್ಲಿ ಸುಸೂತ್ರವಾಗಿ ಹೆರಿಗೆಯಾಗಿದೆ. ವಿಮಾನ ನಿಲ್ದಾಣದಲ್ಲಿ ತಾಯಿ ಮತ್ತು ಮಗುವಿಗೆ ಇಂಡಿಗೋ ಸಂಸ್ಥೆ ಸಿಬ್ಬಂದಿ ಭವ್ಯ ಸ್ವಾಗತ ನೀಡಿದ್ದಾರೆ.

ಇಂಡಿಗೋ ಸಂಸ್ಥೆ ವಿಮಾನದಲ್ಲಿ ಜನಿಸಿದ ನವಜಾತ ಗಂಡು ಮಗುವಿಗೆ ಜೀವನ ಪರ್ಯಂತ ಉಚಿತ ಟಿಕೆಟ್ ಅನ್ನು ಕೊಡುಗೆಯಾಗಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News