×
Ad

ಶಾಲಾ- ಕಾಲೇಜು ಪ್ರಾರಂಭಕ್ಕೆ ಯಾವುದೇ ಆತುರವಿಲ್ಲ: ಸಚಿವ ಡಾ.ಸುಧಾಕರ್

Update: 2020-10-08 18:49 IST

ಬೆಂಗಳೂರು, ಅ.8: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಯಾವುದೇ ರೀತಿಯ ಆತುರವನ್ನು ಸರಕಾರ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜು ಆರಂಭ ಕುರಿತು ವರದಿ ನೀಡುವಂತೆ ಈಗಾಗಲೇ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ತಜ್ಞರು ಚರ್ಚೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದಾರೆ. ವರದಿ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಸರಕಾರಕ್ಕೆ ಮಕ್ಕಳ ಜೀವ ಮತ್ತು ಜೀವನ ಮುಖ್ಯ. ಹಾಗಾಗಿ ಯಾವುದೇ ರೀತಿಯ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಈಗಾಗಲೇ ಸಮಿತಿ ಅನೇಕ ಸಭೆ ಮಾಡಿದೆ. ಸದ್ಯದಲ್ಲೇ ಸರಕಾರಕ್ಕೆ ವರದಿ ಕೊಡಲಿದೆ ಎಂದರು.

ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮಂತೆ ಬಿಜೆಪಿಗೆ ಬಂದಿರುವ ಮುನಿರತ್ನ ಅವರಿಗೆ ಅನ್ಯಾಯ ಆಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News