×
Ad

ಉಡುಪಿ: ಅ.10ಕ್ಕೆ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

Update: 2020-10-08 19:54 IST

ಉಡುಪಿ, ಅ.8: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರಮಾಡಿ ಕೊಲೆಗೈದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಆ.10ರಂದು ಉಡುಪಿಯ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ಅಂಬೇಡ್ಕರ್ ಯುವಸೇನೆ ವಿನೂತನ ಪ್ರತಿಭಟನೆ ನಡೆಸುವುದಾಗಿ ಅಧ್ಯಕ್ಷ ಹರೀಶ್ ಸಲ್ಯಾನ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಈ ಪ್ರತಿಭಟನೆಯಲ್ಲಿ ಪ್ರಗತಿಪರ ಚಿಂತಕರು, ದಲಿತ ಮುಖಂಡರು ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಆಡಳಿತದ ಸರಕಾರವನ್ನು ವಜಾ ಗೊಳಿಸುವಂತೆ ಈ ಪ್ರತಿಭಟನೆಯಲ್ಲಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು ಎಂದು ಮುಖಂಡ ರಾದ ಸುಂದರ್ ಕಪ್ಪೆಟ್ಟು, ಲೋಕೇಶ್ ಪಡುಬಿದ್ರಿ ಮುಂತಾದವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News