ಪಿಜಿಸಿಇಟಿ-ಡಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
Update: 2020-10-08 21:33 IST
ಉಡುಪಿ, ಅ.8: ಜಿಲ್ಲೆಯಲ್ಲಿ ಅ.13 ಹಾಗೂ 14ರಂದು ಕುಂಜಿಬೆಟ್ಟು ಎಂಜಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಜಿಸಿಇಟಿ-ಡಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.