×
Ad

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Update: 2020-10-08 22:48 IST

ಬೆಂಗಳೂರು, ಅಕ್ಟೋಬರ್ 08: ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಲೋಕ್ ಜನಶಕ್ತಿ ಪಾರ್ಟಿ ಮುಖ್ಯಸ್ಥರಾಗಿ ಐದು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ದೇಶದ ಪ್ರಮುಖ ದಲಿತ ಮುಖಂಡರಾಗಿ, ದೀನದಲಿತರ ಶಕ್ತಿಯಾಗಿದ್ದರು. ಜನಪರ ಕಾರ್ಯಕ್ರಮಗಳ ಮೂಲಕ ಬಿಹಾರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಸಜ್ಜನ  ರಾಜಕಾರಣಿಯನ್ನು  ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News