ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ನೌಕರರು

Update: 2020-10-09 13:23 GMT

ಬಳ್ಳಾರಿ, ಅ.9: ಫಾರಂ 2 ನೀಡಲು ಐವತ್ತು ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದ ಬಳ್ಳಾರಿ ಮಹಾನಗರ ಪಾಲಿಕೆಯ ಇಬ್ಬರು ಅಧಿಕಾರಿಗಳು ಲಂಚದ ಹಣದೊಂದಿಗೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಐವತ್ತು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದ್ದು, ಲಂಚದ ಹಣದೊಂದಿಗೆ ಇಬ್ಬರು ಸಿಕ್ಕಿ ಬಿದ್ದಿದ್ದು, ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News