×
Ad

ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಶಿಕ್ಷಣ ತಜ್ಞ ದೊರೆಸ್ವಾಮಿ ಸಲಹೆ ಏನು ?

Update: 2020-10-09 19:45 IST

ಬೆಂಗಳೂರು, ಅ.9: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೊದಲಿಗೆ ಪಿಯು ಕಾಲೇಜುಗಳನ್ನು ಪ್ರಾರಂಭಿಸಲಿ. ಆ ನಂತರ ಶಾಲೆಗಳು ಆರಂಭವಾಗಲಿ ಎಂದು ಶಿಕ್ಷಣ ತಜ್ಞ ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಈ ಕುರಿತು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಗೆ ಪತ್ರ ಬರೆದಿರುವ ಅವರು, ಕಾಲೇಜು ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹಾಗೂ ಈ ಹಂತದ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಮತ್ತು ಕೋವಿಡ್ ನಿಯಮಗಳ ಬಗ್ಗೆ ಅರಿವಿರುತ್ತದೆ ಎಂದು ತಿಳಿಸಿದ್ದಾರೆ.

ಶಾಲೆಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಾಗಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದಿನಬಿಟ್ಟು ದಿನ ತರಗತಿಗಳನ್ನು ನಡೆಸುವುದು ಉತ್ತಮವೆಂದು ಅವರು ಅಭಿಪ್ರಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News