×
Ad

ಅ.11: ಅಂ.ರಾ. ಹೆಣ್ಣು ಮಕ್ಕಳ ದಿನಾಚರಣೆ

Update: 2020-10-09 20:06 IST

ಉಡುಪಿ, ಅ.9: ಚೈಲ್ಡ್‌ಲೈನ್ 1098 ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಟರಿ ಉಡುಪಿ ಇವರ ಸಂಯುಕ್ತ ಆಶ್ರಯ ದಲ್ಲಿ ಅಂತಾ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅ.11ರ ಬೆಳಗ್ಗೆ 9 ಗಂಟೆಗೆ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣ ಕುಕ್ಕಿಕಟ್ಟೆಯಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಹಾಗೂ ಮಣಿಪಾಲ ಮಾಹೆಯ ಶಿಲ್ಪಾ ಜೋಷಿ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News