×
Ad

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸದಾಶಿವ ದೇವಾಡಿಗ ಆಯ್ಕೆ

Update: 2020-10-09 20:11 IST

ಉಡುಪಿ, ಅ.9: ಕಾರ್ಕಳ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ನ್ಯಾಯವಾದಿ ಶೇಖರ್ ಮಡಿವಾಳ ಅವರು ವೈಯಕ್ತಿಕ ಕಾರಣಗಳಿಂದ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ತೆರವಾದ ಅಧ್ಯಕ್ಷ ಸ್ಥಾನಕ್ಕೆ ಸದಾಶಿವ ದೇವಾಡಿಗ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ನ ಪ್ರಕಟಣೆ ತಿಳಿಸಿದೆ.

ನಿವೃತ್ತ ಹಿರಿಯ ಬ್ಯಾಂಕ್ ಅಧಿಕಾರಿಯಾಗಿರುವ ಸದಾಶಿವ ದೇವಾಡಿಗ ಅವರನ್ನು ಕ್ಷೇತ್ರದ ಜನರ ಅಭಿಪ್ರಾಯದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರ ಶಿಫಾರಸಿನ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News