ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆ...

Update: 2020-10-09 15:02 GMT

ಬೆಂಗಳೂರು, ಅ.9: ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮೊದಲು ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೋಷಕರಿಗೆ ಮನವಿ ಮಾಡುತ್ತೇನೆ. ಮತ್ತು ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ ಎಂದು ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರೋನ ಸೋಂಕು ಹರಡುತ್ತೀರುವ ಈ ವೇಳೆಯಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಅಭಿಯಾನವನ್ನು ಪ್ರಾರಂಭಿಸಿವೆ. ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುವುದು ಒಳ್ಳೆಯ ಸಂಗತಿ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News