ಸ್ಯಾಂಡಲ್‌ವುಡ್‌ ಹಿರಿಯ ನಿರ್ದೇಶಕ ವಿಜಯ್ ರೆಡ್ಡಿ ನಿಧನ

Update: 2020-10-09 17:06 GMT

ಬೆಂಗಳೂರು, ಅ. 9: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಅವರು ಬಹು ಅಂಗಾಗ ವೈಫಲ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸ್ಟಾರ್ ‌ಡೈರೆಕ್ಟರ್ ಎನಿಸಿಕೊಂಡಿದ್ದ ವಿಜಯ ರೆಡ್ಡಿ, 40ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳನ್ನು ನಿರ್ದೇಶಿಸಿದ್ದು, ಬಹುತೇಕ ಚಲನಚಿತ್ರಗಳು ಸೂಪರ್ ಹಿಟ್ ಆಗಿವೆ. ಅದಲ್ಲದೆ, ಹಿಂದಿ ಮತ್ತು ತೆಲುಗಿನಲ್ಲಿ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 1970ರಲ್ಲಿ ‘ರಂಗಮಹಲ್ ರಹಸ್ಯ’ ವಿಜಯ್ ರೆಡ್ಡಿಯ ಮೊದಲ ಸಿನಿಮಾವಾಗಿದ್ದು, ಡಾ. ರಾಜ್ ಕುಮಾರ್ ಅಭಿನಯದ ‘ಗಂಧದ ಗುಡಿ’, ‘ಮಯೂರ’, ‘ಶ್ರೀನಿವಾಸ ಕಲ್ಯಾಣ‘, ಬಡವರ ಬಂಧು, ಸನಾದಿ ಅಪ್ಪಣ್ಣ, ನೀ ನನ್ನ ಗೆಲ್ಲಲಾರೆ, ಭಕ್ತ ಪ್ರಹ್ಲಾದ, ‘ಮಯೂರ’, ಹುಲಿಯ ಹಾಲಿನ ಮೇವು, ಆಟೊರಾಜ, ಮುಳ್ಳಿನ ಗುಲಾಬಿ, ಖದೀಮ ಕಳ್ಳರು, ಕುಂತಿ ಪುತ್ರ, ಮೋಜುಗಾರ, ಸೊಗಸುಗಾರ ಹೀಗೆ 40ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News