ಕೊರೋನ ಸೋಂಕಿಗೆ ಶಿಕ್ಷಕ ಬಲಿ

Update: 2020-10-10 10:50 GMT

ಹಾವೇರಿ, ಅ.10: ಹಾವೇರಿ ತಾಲೂಕಿನ ಮರೋಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.

ಐವತ್ತೈದು ವರ್ಷದ ಶಿಕ್ಷಕ ಕಳೆದ ಹದಿನಾಲ್ಕು ದಿನಗಳಿಂದ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿನ ಶಿಕ್ಷಕರ ಮರಣದ ಸಂಖ್ಯೆ ಹದಿನೆಂಟಕ್ಕೆ ಏರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News