ಉಡುಪಿ ಜಿಲ್ಲೆಯ 239 ಮಂದಿಯಲ್ಲಿ ಕೊರೋನ ಸೋಂಕು, ಒಬ್ಬರು ಬಲಿ

Update: 2020-10-10 13:38 GMT

ಉಡುಪಿ, ಅ.10: ಉಡುಪಿ ಜಿಲ್ಲೆಯಲ್ಲಿ ಶನಿವಾರ ಇನ್ನೂ 239 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೊರೋನಕ್ಕೆ ಪಾಸಿಟಿವ್ ಆದವರ ಸಂಖ್ಯೆ 19 ಸಾವಿರವನ್ನು ದಾಟಿದ್ದು 19,236ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 127 ಮಂದಿ ಪುರುಷರು ಹಾಗೂ 112 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 43 ಪುರುಷರು ಹಾಗೂ 53 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣ ಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 113, ಕುಂದಾಪುರ ತಾಲೂಕಿನ 86 ಹಾಗೂ ಕಾರ್ಕಳ ತಾಲೂಕಿನ 36 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಉಳಿದ ನಾಲ್ವರು ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದ್ದಾರೆ.

ದಿನದಲ್ಲಿ 224 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಯೂ 17 ಸಾವಿರ ದಾಟಿ 17,141ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 1952 ಸಕ್ರೀಯ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ತಿಳಿಸಿದರು.

1851 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 2078 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1851 ಮಂದಿ ನೆಗೆಟಿವ್ ಆಗಿದ್ದು, 227 ಮಂದಿ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,42,890 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು ಇವರಲ್ಲಿ 1,23,666 ಮಂದಿ ನೆಗೆಟಿವ್ ಬಂದಿದ್ದಾರೆ. 19224 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 17,141 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 164 ಮಂದಿ ಮೃತಪಟ್ಟಿದ್ದಾರೆ.

ಒಬ್ಬರು ಬಲಿ:  ಶನಿವಾರವೂ ಜಿಲ್ಲೆಯಲ್ಲಿ ಒಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ನ್ಯುಮೋನಿಯಾ ಹಾಗೂ ಮಧುಮೇಹದಿಂದ ಬಳಲುತಿದ್ದ ಉಡುಪಿ ತಾಲೂಕಿನ 65 ವರ್ಷ ಪ್ರಾಯದ ಮಹಿಳೆ ಕೋವಿಡ್‌ಗೆ ಪಾಸಿಟಿವ್ ಕಂಡುಬಂದು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News