ರಾಜಧಾನಿಯಲ್ಲಿ 4,563 ಕೊರೋನ ಪ್ರಕರಣ ದೃಢ: 30 ಜನರು ಮೃತ

Update: 2020-10-10 16:30 GMT

ಬೆಂಗಳೂರು, ಅ.10: ನಗರದಲ್ಲಿ ಶನಿವಾರ ಒಂದೇ ದಿನ 4,563 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 1,726 ಸೋಂಕಿತರು ಬಿಡುಗಡೆಯಾಗಿದ್ದು, 30 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,76,934 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,320 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,08,702 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 64,911 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 3,32,171 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 18 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 7,52,712 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 8,95,842  ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 20,04947 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.58ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.21ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.75.99ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News