ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕಾಗಿ ಯುವಕನ ಥಳಿಸಿ ಹತ್ಯೆ

Update: 2020-10-10 16:45 GMT

ಹೊಸದಿಲ್ಲಿ: ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನುವ ಕಾರಣಕ್ಕಾಗಿ  ವಿದ್ಯಾರ್ಥಿಯೊಬ್ಬನನ್ನು ಥಳಿಸಿ ಕೊಂದ ಘಟನೆ ದಿಲ್ಲಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿಲ್ಲಿಯ ಆದರ್ಶ್ ನಗರದ ನಿವಾಸಿ ರಾಹುಲ್ ಹಲ್ಲೆಯಿಂದ ಸಾವನ್ನಪ್ಪಿದ್ದಾನೆ.

“ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಯುವತಿಯ ಸಹೋದರ ಮತ್ತು ಸಂಬಂಧಿಕರು ರಾಹುಲ್ ಥಳಿಸಿದ್ದಾರೆ. ಇದರಿಂದ ಆತ ಮೃತಪಟ್ಟಿದ್ದಾನೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News