ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗೆ ಕೋವಿಡ್ ದೃಢ

Update: 2020-10-10 16:50 GMT

ಬೆಂಗಳೂರು, ಅ.10: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಗೆ ಕೋವಿಡ್ ದೃಢಪಟ್ಟಿದೆ.

ಈ ಸಂಬಂಧ ಎನ್.ರವಿಕುಮಾರ್ ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನ ದೃಢಪಟ್ಟಿದ್ದು, ಯಾವುದೇ ರೋಗಲಕ್ಷಣಗಳಿಲ್ಲ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳನ್ನ ಸ್ವೀಕರಿಸುತ್ತಿಲ್ಲ. ಕ್ಷಮೆ ಇರಲಿ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News